ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 159 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ನೇಮಕಾತಿ 159 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 29,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)
Organisation ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)
Educational Qualification ಎಸ್‌.ಎಸ್‌.ಎಲ್‌.ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale ತಿಂಗಳಿಗೆ 21,400/- ರಿಂದ 42,000/-ರೂ
Application Start Date June 10, 2019
Application End Date June 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 29,2019ರ ಅನ್ವಯ ಕನಿಷ್ಟ 18 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ, ಇತರೆ ಅಭ್ಯರ್ಥಿಗಳು ಗರಿಷ್ಟ 25 ವರ್ಷ ಮತ್ತು ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ , ಸಹಿಷ್ಣುತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜುಲೈ 3,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್‌ https://https://ksp.gov.in/index.aspx ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 29,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KSP Recruitment 2019-20:Apply Online for 159 Armed Police Constable Vacancies. Karnataka State Police (KSP) invited Online applications from eligible and interested candidates to fill up Armed Police Constable Posts through KSP official notification 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X