ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ನೇಮಕಾತಿ 163 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 29,2019 ರ ಸಂಜೆ 6 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ |
| Organisation | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) |
| Educational Qualification | ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಕರ್ನಾಟಕ |
| Salary Scale | 21,400/- ರಿಂದ 42,000/-ರೂ |
| Application Start Date | June 10, 2019 |
| Application End Date | June 29, 2019 |
ಶೈಕ್ಷಣಿಕ ವಿದ್ಯಾರ್ಹತೆ:
ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಜೂನ್ 29,2019ರ ಅನ್ವಯ ಕನಿಷ್ಟ 19 ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ, ಇತರೆ ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅರ್ಹತೆ ಮತ್ತು 2ಎ,2ಬಿ,3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜುಲೈ 3,2019 ರೊಳಗೆ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್ https://www.ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 29,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











