ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ನೇಮಕಾತಿ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 1,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) |
| Organisation | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) |
| Educational Qualification | ಎಸ್.ಎಸ್.ಎಲ್.ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ಕರ್ನಾಟಕ |
| Application Start Date | June 7, 2019 |
| Application End Date | July 1, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜೂನ್ 27,2019 ರೊಳಗೆ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್ https://www.ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 1,,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











