ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ: 240 ಪಿಎಸ್‌ಐ ಮತ್ತು ಆರ್‌ಎಸ್‌ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ಒಟ್ಟು 240 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಖಾಲಿ ಇರುವ 200 ಪೊಲೀಸ್ ಸಬ್- ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು 40 ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್/ಡಿಎಆರ್‌) (ಪುರುಷ) ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 5,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪೊಲೀಸ್ ಸಬ್- ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್/ಡಿಎಆರ್‌) (ಪುರುಷ)
Organisation ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)
Educational Qualification ಪದವಿ ಅಥವಾ ತತ್ಸಮಾನ ಪದವಿ
Job Location ಕರ್ನಾಟಕ
Application Start Date July 15, 2019
Application End Date August 5, 2019

ಶೈಕ್ಷಣಿಕ ವಿದ್ಯಾರ್ಹತೆ:

ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪೊಲೀಸ್ ಸಬ್‌ -ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ಮತ್ತು ಸಶಸ್ತ್ರ ಪೊಲೀಸ್ ಸಬ್‌- ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ , ಸಹಿಷ್ಣುತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಆಗಸ್ಟ್ 7,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್‌ https://ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2019 notification has been released on official website for the recruitment of 240 PSI and RSI Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+