ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 40 ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಆರ್.ಪಿ)(ಪುರುಷ) ಹಾಗೂ ಸೇವಾನಿರತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.
ಆಸಕ್ತರು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 28,2019 ರ ಸಂಜೆ 6 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆ.ಎಸ್.ಆರ್.ಪಿ) (ಪುರುಷ) ಹಾಗೂ ಸೇವಾನಿರತ ಹುದ್ದೆಗಳು |
| Organisation | ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) |
| Educational Qualification | ಪದವಿ ಅಥವಾ ತತ್ಸಮಾನ ಪದವಿ |
| Job Location | ಕರ್ನಾಟಕ |
| Salary Scale | 37,900/- ರಿಂದ 70,850/-ರೂ |
| Application Start Date | August 8, 2019 |
| Application End Date | August 28, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯು.ಇ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸೇವಾ ನಿರತ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ಜೊತೆಯಲ್ಲಿ ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ೫ ವರ್ಷಗಳ ಕನಿಷ್ಟ ಸೇವೆಯನ್ನು ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ /ಹೆಡ್ ಕಾನ್ಸ್‌ಟೇಬಲ್ / ಪೊಲೀಸ್ ಕಾನ್ಸ್‌ಟೇಬಲ್ ಆಗಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಆಗಸ್ಟ್ 28,2019ರ ಅನ್ವಯ ಅಭ್ಯರ್ಥಿಗೆ ಕನಿಷ್ಟ 21 ವರ್ಷ ಆಗಿರಬೇಕು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ 28 ವರ್ಷದೊಳಗಿನ ಅಭ್ಯರ್ಥಿಗಳು ಮತ್ತು 26 ವರ್ಷ ವಯೋಮಿತಿಯೊಳಗಿನ ಇತರೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸೇವಾ ನಿರತ ಅಭ್ಯರ್ಥಿಗಳಿಗೆ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ ಮತ್ತು ಇತರೆ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಆಗಸ್ಟ್ 30,2019 ರೊಳಗೆ ಪಾವತಿಸಬಹುದು.
ನಿಗದಿತ ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್ https://www.ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











