KSP Recruitment 2020: 45 ಇ.ಇ.ಜಿ ತಂತ್ರಜ್ಞರು, ಪ್ರಯೋಗಾಲಯ ಸಹಾಯಕರು ಮತ್ತು ಸೇವಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ 45 ಪ್ರಯೋಗಾಲಯ ಸಹಾಯಕರು (ಫೋಟೋಗ್ರಫಿ), ಇ.ಇ.ಜಿ ತಂತ್ರಜ್ಞರು, ಪ್ರಯೋಗಾಲಯ ಸೇವಕರ ಕಲ್ಯಾಣ-ಕರ್ನಾಟಕೇತರ ಹಾಗೂ ಕಲ್ಯಾಣ-ಕರ್ನಾಟಕ ಹುದ್ದೆಗಳಿಗೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ 45 ಹುದ್ದೆಗಳ ನೇಮಕಾತಿ...ನ.25ರೊಳಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್‌ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆಯ ವಿವರವನ್ನು ತಿಳಿಯಲು ಮುಂದೆ ಓದಿ.

ಹುದ್ದೆಗಳ ವಿವರ:

ಹುದ್ದೆಗಳ ವಿವರ:

ಪ್ರಯೋಗಾಲಯ ಸಹಾಯಕರು- 1 ಹುದ್ದೆ
ಇ.ಇ.ಜಿ ತಂತ್ರಜ್ಞರು - 7 ಹುದ್ದೆಗಳು
ಪ್ರಯೋಗಾಲಯ ಸೇವಕರು - 37 ಹುದ್ದೆಗಳು
ಒಟ್ಟು 45 ಹುದ್ದೆಗಳು

ವಿದ್ಯಾರ್ಹತೆ:

ವಿದ್ಯಾರ್ಹತೆ:

ಇ.ಇ.ಜಿ ತಂತ್ರಜ್ಞರು ಹುದ್ದೆಗಳಿಗೆ ವಿಜ್ಞಾನ ಪದವಿ, ಇ.ಇ.ಜಿ ತಾಂತ್ರಿಕ ಕೋರ್ಸ್/ಮೆಡಿಕಲ್ ಲ್ಯಾಬೋರೇಟರಿ ಟೆಕ್ ಕೋರ್ಸ್ ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಅಥವಾ ಯಾವುದೇ ಇತರೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಪ್ರಯೋಗಾಲಯ ಸಹಾಯಕರು (ಫೋಟೋಗ್ರಫಿ) ಹುದ್ದೆಗಳಿಗೆ ಸಿನಿಮಾಟೋಗ್ರಫಿಯಲ್ಲಿ ಅಥವಾ ಫೋಟೋಗ್ರಫಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಸರ್ಕಾರದಿಂದ ಮಾನ್ಯತೆ ಹೊಂದಿರುವಂತಹ ಸಂಸ್ಥೆಗಳಿಂದ ಹೊಂದಿರತಕ್ಕದ್ದು. ಕನಿಷ್ಟ ಒಂದು ವರ್ಷ ಪ್ರಾಯೋಗಿಕ ಅನುಭವವನ್ನು ಅನ್‌ಲಾಗ್ ಮತ್ತು ಡಿಜಿಟಲ್ ಫೋಟೋಗ್ರಫಿ ಉಪಕರಣಗಳ ನಿರ್ವಹಣೆಯನ್ನು ವೀಡಿಯೋಗ್ರಫಿ ಸಹಿತ ಹೊಂದಿರಬೇಕು.

ಪ್ರಯೋಗಾಲಯ ಸೇವಕರು ಹುದ್ದೆಗಳಿಗೆ ಪಿಯುಸಿ ಅಥವಾ 10+2 ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ವಯೋಮಿತಿ:

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ನವೆಂಬರ್ 25,2020ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷ ಪೂರೈಸಿರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿಯ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ವೇತನದ ವಿವರ:

ಇಇಜಿ ತಂತ್ರಜ್ಞರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/- ರೂ ಪ್ರಯೋಗಾಲಯ ಸಹಾಯಕರು (ಫೋಟೋಗ್ರಫಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ಮತ್ತು ಪ್ರಯೋಗಾಲಯ ಸೇವಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 32,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಅರ್ಜಿಗಳನ್ನು ಪರಿಶೀಲಿಸಿ ನಂತರ ಅಭ್ಯರ್ಥಿಗಳು ನೀಡಲಾಗಿರುವ ವಿವರ ಮತ್ತು ಕೋರಲಾಗಿರುವ ಮೀಸಲಾತಿಗಳು ಸರಿಯಿದೆ ಎಂದು ಖಾತ್ರಿ ಪಡಿಸಿದ ಮೇಲೆ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಹಾಲಿ ಚಾಲ್ತಿಯಲ್ಲಿರುವ ನಿಯಮ ಆದೇಶಗಳನ್ವಯ, ಮೀಸಲಾತಿಗಳನುಸಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪ.ಜಾ/ ಪ.ಪಂ/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಇಲಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ ಪ್ರತಿಯನ್ನು ಇಟ್ಟುಕೊಂಡಿರತಕ್ಕದ್ದು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಅಕ್ಟೋಬರ್ 27,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 25,2020
ಶುಲ್ಕವನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 27,2020

ಅರ್ಜಿ ಸಲ್ಲಿಕೆ ವಿಧಾನ:

ಅರ್ಜಿ ಸಲ್ಲಿಕೆ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್ http://rec20.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ನವೆಂಬರ್ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2020 notification has been released for 45 laboratory assistant, eeg technician and laboratory attender posts. Interested candidates can apply through online before November 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+