ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ..ಮಾ.18ರೊಳಗೆ ಅರ್ಜಿ ಹಾಕಿ

 

CRITERIA DETAILS
Name Of The Posts ವೈಜ್ಞಾನಿಕ ಅಧಿಕಾರಿ
Organisation ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
Educational Qualification ಸ್ನಾತಕೋತ್ತರ ಪದವಿ
Job Location ಕರ್ನಾಟಕ
Salary Scale ತಿಂಗಳಿಗೆ 40,900/- ರಿಂದ 78,200/-ರೂ
Application Start Date February 20, 2020
Application End Date March 18, 2020

ಇಲಾಖೆಯು ನ್ಯಾಯ ವಿಜ್ಞಾನ ಪ್ರಯೋಗಾಲಯ/ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಹಾಗೂ ಹೈದ್ರಬಾದ್-ಕರ್ನಾಟಕ ಮೀಸಲಾತಿಯಡಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಸಕ್ತರು ಮಾರ್ಚ್ 18,2020ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ..ಮಾ.18ರೊಳಗೆ ಅರ್ಜಿ ಹಾಕಿ

 

ಹುದ್ದೆಗಳ ವಿವರ:

ಒಟ್ಟು 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ವಿವರವನ್ನು ಮೇಲಿನ ದೃಶ್ಯದಲ್ಲಿ ನೀಡಲಾಗಿದೆ.

ವಿದ್ಯಾರ್ಹತೆ:

ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಹಾಗೂ ಸರ್ಕಾರದಿಂದ ಅಂಗೀಕೃತವಾಗಿರುವ ಯಾವುದಾದರೂ ರಿಸರ್ಚ್ ಸಂಸ್ಥೆಯಲ್ಲಿ ರಿಸರ್ಚ್ ಸ್ಕಾಲರ್ ಆಗಿ 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಮಾರ್ಚ್ 18,2020ರ ಅನ್ವಯ ಕನಿಷ್ಟ 21 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಅಭ್ಯರ್ಥಿಗಳಿಗೆ 150 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಎರಡು ಪತ್ರಿಕೆಗಳನ್ನೊಳಗೊಂಡ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು.

ಶುಲ್ಕದ ವಿವರ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, ಪ್ರವರ್ಗ-2ಎ,2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಗದು ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕವನ್ನು ಪಾವತಿಸಲು ಮಾರ್ಚ್ 20,2020 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://www.ksp.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 18,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಸಹಾಯವಾಣಿ- 080-22943346

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSP recruitment 2020 notification has been released on official website for the recruitment of 54 scientific officer posts. Interested candidates can apply through online before 18th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more