ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು(ಕೆಎಸ್‌ಪಿ) 2021ನೇ ಸಾಲಿನ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 100 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಕ್ರೀಡಾ ಅಭ್ಯರ್ಥಿಗಳಿಂದ (ಪುರುಷರು ಮತ್ತು ಮಹಿಳೆಯರು) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೆಎಸ್‌ಪಿಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಿದ್ದು, ಕರ್ನಾಟಕದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಆಗಸ್ಟ್ 31, 2021 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 29,2021 ರಂದು ಕೊನೆಗೊಳ್ಳಲಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ವಿದ್ಯಾರ್ಹತೆ:
ಕೆಎಸ್‌ಪಿ ಪಿಸಿ ಮತ್ತು ಪಿಎಸ್‌ಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು; 12ನೇ ತರಗತಿ; ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಪದವಿ ಹೊಂದಿರಬೇಕು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ವಯೋಮಿತಿ:
ಕೆಎಸ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 2021ರ ಕೆಎಸ್‌ಪಿ ನೇಮಕಾತಿ ನಿಯಮಾನುಸಾರ ಸೆಪ್ಟೆಂಬರ್ 29,2021ರ ಅನ್ವಯ ಕನಿಷ್ಟ 19 ವರ್ಷ ಪೂರೈಸಿರಬೇಕು. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷದೊಳಗಿನ ಮತ್ತು ಇತರೆ ಗರಿಷ್ಟ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 29,2021ರ ಅನ್ವಯ ಕನಿಷ್ಟ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 30 ವರ್ಷದೊಳಗಿನ ಮತ್ತು ಇತರೆ ಗರಿಷ್ಟ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರಾಗಿರುತ್ತಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ವೇತನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2021ರ ನೇಮಕಾತಿಯ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂ ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂ ವರೆಗೆ ವೇತನವನ್ನು ನೀಡಲಾಗುವುದು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ಅರ್ಜಿ ಶುಲ್ಕ:
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ (GM ಮತ್ತು OBC -2A/2B/3A/3B) ಅಭ್ಯರ್ಥಿಗಳು 400/-ರೂ ಮತ್ತು (SC/ST/CAT-I) ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ (GM ಮತ್ತು OBC -2A/2B/3A/3B) ಅಭ್ಯರ್ಥಿಗಳು 500/-ರೂ ಮತ್ತು (SC/ST/CAT-I) ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಆನ್‌ಲೈನ್/ನಗದು ರೂಪದಲ್ಲಿ ಅಕ್ಟೋಬರ್ 1,2021ರೊಳಗೆ ಪಾವತಿಸಬೇಕಿರುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ಆಯ್ಕೆಪ್ರಕ್ರಿಯೆ:
ಕೆಎಸ್‌ಪಿ ಅಧಿಸೂಚನೆ 2021ರ ನಿಯಮಗಳ ಪ್ರಕಾರ ಅಗತ್ಯ ದೈಹಿಕ ಮತ್ತು ವೈದ್ಯಕೀಯ ಫಿಟ್ನೆಸ್ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ/ಸಹಿಷ್ಣುತೆ ಪರೀಕ್ಷೆ (ಪಿಇಟಿ/ಇಟಿ)/ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ) ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 ಅರ್ಜಿ ಸಲ್ಲಿಕೆ:
ಕೆಎಸ್‌ಪಿ ಪಿಸಿ ಮತ್ತು ಪಿಎಸ್‌ಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rec21.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 29,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











