ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 16 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 30,2021 ರಿಂದ ಜನವರಿ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KSP ನೇಮಕಾತಿ 2021 ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಮತ್ತು ಎಂಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
KSP ನೇಮಕಾತಿ 2021 ವಯೋಮಿತಿ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 28,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.
KSP ನೇಮಕಾತಿ 2021 ವೇತನ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
KSP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KSP ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಜನವರಿ 31,2022 ಕೊನೆಯ ದಿನವಾಗಿರುತ್ತದೆ.
KSP ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://fslab21.ksponline.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 30,2021 ರಿಂದ ಜನವರಿ 28,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











