ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ)ಇಲಾಖೆಯಲ್ಲಿ 2021ನೇ ಸಾಲಿಗೆ ಎರಡು ನೂರ ಆರು (206) ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಕರ್ನಾಟಕದಾದ್ಯಂತ ಪೂರ್ಣಾವಧಿ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಸೆಪ್ಟೆಂಬರ್ 23,2021 ರಿಂದ ಪ್ರಾರಂಭವಾಗಿ ನವೆಂಬರ್ 7,2021 ರಂದು ಕೊನೆಗೊಳ್ಳಲಿದೆ.

KSP ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನದ ವಿಷಯದಲ್ಲಿ ಕನಿಷ್ಟ ಶೇಕಡಾ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನದ ವಿಷಯದಲ್ಲಿ ಕನಿಷ್ಠ 55%ರಷ್ಟು ಅಂಕಗಳೊಂದಿಗೆ ಪದವಿ ಹೊಂದಿರಬೇಕು ಹಾಗೂ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ 55% ಅಂಕಗಳೊಂದಿಗೆ 1 ವರ್ಷದ ಡಿಪ್ಲೋಮಾ ಅನ್ನು ಹೊಂದಿರಬೇಕು ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನದ ವಿಷಯದಲ್ಲಿ ಕನಿಷ್ಟ ಶೇಕಡ 55ರಷ್ಟು ಅಂಕಗಳೊಂದಿಗೆ ಪದವಿ ಹೊಂದಿರತಕ್ಕದ್ದು, ಜೊತೆಗೆ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

KSP ನೇಮಕಾತಿ 2021 ವಯೋಮಿತಿ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು ಮತ್ತು ಓಬಿಸಿ-2ಎ/2ಬಿ/3ಎ/3ಬಿ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KSP ನೇಮಕಾತಿ 2021 ವೇತನ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KSP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ನೇಮಕಾತಿ ಅಧಿಸೂಚನೆ 2021 ರಲ್ಲಿ ಸೂಚಿಸಿದಂತೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

KSP ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

KSP ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rec21.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸೀನ್ ಆಫ್ ಕ್ರೈಂ ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ