ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KSP ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ 55ರಷ್ಟು ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆ ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಹಾಗೂ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ 1 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಅಥವಾ ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಟ ಶೇಕಡ 55 ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರತಕ್ಕದ್ದು ಜೊತೆಗೆ ವಿಧಿ ವಿಜ್ಞಾನಗಳ ವಿಷಯದಲ್ಲಿ ಶೇಕಡ 55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದ್ದು.
ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
KSP ನೇಮಕಾತಿ 2021 ವಯೋಮಿತಿ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 15,2022ರ ಅನ್ವಯ ಕನಿಷ್ಟ 21 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
KSP ನೇಮಕಾತಿ 2021 ವೇತನ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
KSP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KSP ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.
KSP ನೇಮಕಾತಿ 2021 ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಡಿಸೆಂಬರ್ 17,2021ರ ಬೆಳಿಗ್ಗೆ 10:00 ಗಂಟೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 15,2022ರ ಸಂಜೆ 6 ಗಂಟೆಗೆ
ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ : ಜನವರಿ 18,2022
KSP ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ಪೊಲೀಸ್ ಇಲಾಖೆ, ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ನೇಮಕಾತಿಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಜನವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











