KSP Recruitment 2021 : 250 ಅನುಯಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಪೊಲೀಸ್ ಇಲಾಖೆಯಲ್ಲಿ 250 ಅನುಯಾಯಿ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಅನುಯಾಯಿ (ಪುರುಷ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಆಕಸ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣವಾದ ಮಾಹಿತಿಯನ್ನು ಇಲ್ಲಿ ಪಡೆಯಿರಿ.

ವಿದ್ಯಾರ್ಹತೆ :

ವಿದ್ಯಾರ್ಹತೆ :

ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :

ವಯೋಮಿತಿ :

ಆಗಸ್ಟ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ, ಪ.ಪಂ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ ಶ್ರೇಣಿ :

ವೇತನ ಶ್ರೇಣಿ :

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 32,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಅನುಯಾಯಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೃತ್ತಿಪರ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ಅರ್ಜಿದಾರರು 250/-ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ನಿಗದಿತ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಶಾಖೆಗಳ /ಅಂಚೆ ಕಛೇರಿ ವೇಳೆಯಲ್ಲಿ ಶುಲ್ಕವನ್ನು ಸೆಪ್ಟೆಂಬರ್ 1,2021ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rec21.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 30,2021ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2021 notification has been released for 250 followers posts. Interested candidates can apply before august 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+