ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಅದರಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿಕೊಂಡು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 19 ರಿಂದ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಪೊಲೀಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 19 ರಿಂದ ಸೆಪ್ಟೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.