ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ ಹಾಗೂ ಸೇವೆಯಲ್ಲಿರುವವರು) (ಮಿಕ್ಕುಳಿದ ವೃಂದದ) ಮತ್ತು ಕಲ್ಯಾಣ-ಕರ್ನಾಟಕ ಪ್ರದೇಶದ (ಸ್ಥಳೀಯ ವೃಂದದ) ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್ (ಪುರುಷ ಮತ್ತು ಮಹಿಳಾ ಹಾಗೂ ಸೇವೆಯಲ್ಲಿರುವವರು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಏಪ್ರಿಲ್ 1,2020ರ ಅನ್ವಯ ಕನಿಷ್ಟ 21 ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 32 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ಮತ್ತು ಸೇವಾ ನಿರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು ಸೇವಾ ನಿರತ ಗರಿಷ್ಟ 35 ವರ್ಷದೊಳಗಿನ ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಶುಲ್ಕದ ವಿವರ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 22,2021 ಬೆಳಿಗ್ಗೆ 10 ಗಂಟೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22,2021 ಸಂಜೆ 6 ಗಂಟೆಗೆ
ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: ಫೆಬ್ರವರಿ 24,2021
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ http://rec20.ksp-online.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.