KSP Recruitment 2021 : 70 ವಿಶೇಷ ಮೀಸಲು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 70 ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 20,2021 ರಿಂದ ಜನವರಿ 18,2022ರ ಬೆಳಿಗ್ಗೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KSP ನೇಮಕಾತಿ 2021 ವಿದ್ಯಾರ್ಹತೆ :

KSP ನೇಮಕಾತಿ 2021 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

KSP ನೇಮಕಾತಿ 2021 ವಯೋಮಿತಿ :

KSP ನೇಮಕಾತಿ 2021 ವಯೋಮಿತಿ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 18,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

KSP ನೇಮಕಾತಿ 2021 ವೇತನ :

KSP ನೇಮಕಾತಿ 2021 ವೇತನ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/- ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KSP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

KSP ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KSP ನೇಮಕಾತಿ 2021 ಅರ್ಜಿ ಶುಲ್ಕ :

KSP ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಜನವರಿ 20,2022 ಕೊನೆಯ ದಿನವಾಗಿರುತ್ತದೆ.

KSP ನೇಮಕಾತಿ 2021 ಅರ್ಜಿ ಸಲ್ಲಿಕೆ :

KSP ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ವಿಶೇಷ ಮೀಸಲು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://siksrp21.ksponline.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 20,2021 ರಿಂದ ಜನವರಿ 18,2022ರ ಬೆಳಿಗ್ಗೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2021 notification has been released for 70 special reserve sub inspector posts. Interested candidates can apply through online before January 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+