KSP Recruitment 2021: 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್ ಇಲಾಖೆಯಲ್ಲಿ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ವೈಜ್ಞಾನಿಕ ಅಧಿಕಾರಿಗಳ ಆಯ್ಕೆ ಸಮಿತಿಯ ಅಧ್ಯಕ್ಷರು ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 84 ವೈಜ್ಞಾನಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಪೋಸ್ಟ್ ಗ್ರಾಜುಯೇಟ್, ಎಂ.ಎಸ್ಸಿ ಎಂ.ಟೆಕ್, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜುಲೈ 7,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಪ್ರ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 250/-ರೂ ಮತ್ತು ಪ.ಜಾ/ಪ.ಪಂ/ಪ್ರ-!ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್‌.ಡಿ.ಎಫ್‌.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಆನ್‌ಲೈನ್/ನಗದು ರೂಪದಲ್ಲಿ ಜುಲೈ 9,2021ರೊಳಗೆ ಪಾವತಿಸಬೇಕಿರುತ್ತದೆ. ನಂತರ ಚಲನ್ ನ 'ಅಭ್ಯರ್ಥಿ ಪ್ರತಿ" ಯನ್ನು ಇಟ್ಟುಕೊಂಡಿರತಕ್ಕದ್ದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 7,2021ರ ಬೆಳಿಗ್ಗೆ 10 ಗಂಟೆಯಿಂದ ಜುಲೈ 7,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2021 notification has been released for 84 scientific officer posts. Apply online before July 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+