KSP Recruitment 2021: 402 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಜೂನ್.22ರ ವರೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕರ್ನಾಟಕ ಪೊಲೀಸ್ ಇಲಾಖೆ 402 ಹುದ್ದೆಗಳ ನೇಮಕಾತಿ..ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜೂನ್ 22,2021ರ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:

ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900/-ರಿಂದ 70,850/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಇತರೆ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಸಬ್‌-ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಪಾವತಿಸಲು ಜೂನ್ 24,2021 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆಯ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP extended application date for police sub inspector posts. Apply online before june 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+