KSP Recruitment 2022 : 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತರು ಆನ್‌ಲೈನ್ ಮೂಲಕ ನವೆಂಬರ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ :

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR)- ಕರ್ನಾಟಕ: 3064 ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR) -ಕಲ್ಯಾಣ ಕರ್ನಾಟಕ: 420 ಹುದ್ದೆಗಳು
ಒಟ್ಟು 3484 ಹುದ್ದೆಗಳು

KSP Recruitment 2022 ವಿದ್ಯಾರ್ಹತೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಆಯ್ಕೆಯ ಸಲುವಾಗಿ ಕಂಡಿಕೆ 1ರಲ್ಲಿ ನಮೂದಿಸಿರುವ ವೃಂದ ಮತ್ತು ನೇಮಕಾತಿ(ತಿದ್ದುಪಡಿ) ನಿಯಮ 2019ರ ಅನ್ವಯ ಅಕ್ಟೋಬರ್ 31,2022ಕ್ಕೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

KSP Recruitment 2022 ವಯೋಮಿತಿ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಬುಡಕಟ್ಟು ಜನಾಂಗ/ಟ್ರೈಬ್ಸ್ ನ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KSP Recruitment 2022 ವೇತನ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KSP Recruitment 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುವುದು.

KSP Recruitment 2022 ಅರ್ಜಿ ಶುಲ್ಕ :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಆನ್‌ಲೈನ್/ಅಧಿಕೃತ ಬ್ಯಾಂಕ್ ಶಾಖೆಗಳ/ಸ್ಥಳೀಯ ಅಂಚೆ ಕಚೇರಿಗಳ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಡಿಸೆಂಬರ್ 2,2022 ಕೊನೆಯ ದಿನವಾಗಿರುತ್ತದೆ.

KSP Recruitment 2022 ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ
ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 30,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KSP recruitment 2022 notification has been released for 3484 armed police constable (CAR/DAR) posts. Application date extended to November 30. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X