ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1591 ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 21,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KSP ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 12ನೇ ತರಗತಿ/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
KSP ನೇಮಕಾತಿ 2022 ವಯೋಮಿತಿ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನವೆಂಬರ್ 21,2022ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ ಮತ್ತು ಬುಡಕಟ್ಟು ಜನಾಂಗದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KSP ನೇಮಕಾತಿ 2022 ವೇತನ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
KSP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KSP ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗ, ಪ್ರವರ್ಗ-2ಎ, ಪ್ರವರ್ಗ-2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ನವೆಂಬರ್ 23,2022ರೊಳಗೆ ಪಾವತಿಸಬಹುದು.
KSP ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rec21.ksp-online.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 20,2022ರಂದು ಬೆಳಿಗ್ಗೆ 10 ಗಂಟೆಯಿಂದ ನವೆಂಬರ್ 21,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಕಲ್ಯಾಣ ಕರ್ನಾಟಕ ಭಾಗದ ನೇಮಕಾತಿ ಅಧಿಸೂನಚೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











