KSP Recruitment 2022: 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Kavya L

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 19,2022 ರಿಂದ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ

ಖಾಲಿ ಹುದ್ದೆಗಳ ವಿವರ

ಹುದ್ದೆ ಹೆಸರು- ಒಟ್ಟು ಹುದ್ದೆಗಳು

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR)- ಕರ್ನಾಟಕ: 3064 ಹುದ್ದೆಗಳು

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR) -ಕಲ್ಯಾಣ ಕರ್ನಾಟಕ: 420 ಹುದ್ದೆಗಳು

ವಿದ್ಯಾರ್ಹತೆ

ವಿದ್ಯಾರ್ಹತೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಆಯ್ಕೆಯ ಸಲುವಾಗಿ ಕಂಡಿಕೆ 1ರಲ್ಲಿ ನಮೂದಿಸಿರುವ ವೃಂದ ಮತ್ತು ನೇಮಕಾತಿ(ತಿದ್ದುಪಡಿ) ನಿಯಮ 2019ರ ಅನ್ವಯ ಅಕ್ಟೋಬರ್ 31,2022ಕ್ಕೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ

ವಯೋಮಿತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಕ್ಟೋಬರ್ 31,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಬುಡಕಟ್ಟು ಜನಾಂಗ/ಟ್ರೈಬ್ಸ್ ನ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ

ವೇತನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್

ಅರ್ಜಿ ಶುಲ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಆನ್‌ಲೈನ್/ಅಧಿಕೃತ ಬ್ಯಾಂಕ್ ಶಾಖೆಗಳ/ಸ್ಥಳೀಯ ಅಂಚೆ ಕಚೇರಿಗಳ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ನವೆಂಬರ್ 3,2022 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ.

ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಸೆಪ್ಟೆಂಬರ್ 19,202ರಿಂದ ಅಕ್ಟೋಬರ್ 31,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು
ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KSP recruitment 2022 notification has been released for 3484 armed police constable (CAR/DAR) posts. Interested candidates can apply before october 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+