KSP Recruitment 2022: 1500 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1500 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಇಲಾಖೆಯು ಪ್ರಕಟಣೆ ಹೊರಡಿಸಿದ ಬಳಿಕ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

1500 ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿ ಪ್ರಕಟ

ಅರ್ಹತೆಗಳ ವಿವರ :

ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಪಿಯುಸಿ/10+2/ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಬುಡಕಟ್ಟು ಜನಾಂಗ/ಟ್ರೈಬ್ಸ್ ನ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ವಿವರ :

ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನಿಗದಿತ ದಿನಾಂಕಗಳೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದ್ದು, ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
KSP recruitment 2022 notification to be release soon for 1500 civil police constable posts. Here is eligibility criteria, salary and application details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X