ಜಿಲ್ಲಾ ಪಂಚಾಯಿತಿ ಕಾರವಾರ ಉತ್ತರ ಕನ್ನಡ ವತಿಯಿಂದ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಅಡಿಯಲ್ಲಿ ಅನುಷ್ಟಾನವಾಗುತ್ತಿರುವ ಎನ್.ಆರ್.ಎಲ್.ಎಂ ಯೋಜನೆಯಡಿ ಜಿಲ್ಲೆ ಮತ್ತು ತಾಲ್ಲೂಕು ಅಭಿಯಾನ ಘಟಕಗಳಲ್ಲಿ ಅನುಮೋದನೆಯೊಂಡು ಖಾಲಿಯಿರುವ 9 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಎಂಐಎಸ್ ಸಹಾಯಕ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆನ್‌ಲೈನ್ ಮೂಲಕ ಡಿಸೆಂಬರ್ 29,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಡಿಎಂಐಎಸ್ ಸಹಾಯಕ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಪೂರ್ಣಕಾಲಿಕ ಪದವಿ, ಸ್ನಾಕತೋತ್ತರ ಪದವಿ, ಪಿ.ಜಿ ಡಿಪ್ಲೋಮಾ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರ:
ಡಿಎಂಐಎಸ್ ಸಹಾಯಕ - 1 ಹುದ್ದೆ
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ - 6 ಹುದ್ದೆಗಳು
ಕ್ಲಸ್ಟರ್ ಮೇಲ್ವಿಚಾರಕ - 2 ಹುದ್ದೆಗಳು
ಒಟ್ಟು 9 ಹುದ್ದೆಗಳು
ವಯೋಮಿತಿ:
ಡಿಎಂಐಎಸ್ ಸಹಾಯಕ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಡಿಎಂಐಎಸ್ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 20,500/-ರೂ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಡಿಎಂಐಎಸ್ ಸಹಾಯಕ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೌಖಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ:
ಡಿಎಂಐಎಸ್ ಸಹಾಯಕ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ksrlps.karnataka.gov.in/english ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಮಬರ್ 29,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.


Click it and Unblock the Notifications











