ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ 849 ಹುದ್ದೆಗಳ ನೇಮಕಾತಿ

ಒಟ್ಟು 849 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.

ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿನ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 849 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದೆ.

ಕೆ ಎಸ್ ಆರ್ ಪಿ 849 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

  • ಪೊಲೀಸ್ ಕಾನ್ಸ್‌ಟೇಬಲ್ (ಕೆ ಎಸ್ ಆರ್ ಪಿ ) (ಪುರುಷ) - 834
  • ಪೊಲೀಸ್ ಕಾನ್ಸ್‌ಟೇಬಲ್ (ಕೆ ಎಸ್ ಆರ್ ಪಿ ) (ಪುರುಷ) (ಹೈ-ಕ) - 15

ಒಟ್ಟು = 849

ವಿದ್ಯಾರ್ಹತೆ

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ./ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 08.12.2017ಕ್ಕೆ ಹೊಂದಿರಬೇಕು. (ಮಾಜಿ ಸೈನಿಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಪ್ರಮಾಣ ಪತ್ರವನ್ನು ದಿನಾಂಕ: 08.12.2017 ರೊಳಗೆ ಹೊಂದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಮಾತ್ರ ಪರಿಗಣಿಸಲಾಗುವುದು).

ವೇತನ ಶ್ರೇಣಿ; ರೂ.11600-21000/-

ವಯೋಮಿತಿ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 08.12.2017ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
  • ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
  • ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹250/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹100/-

ಪ್ರಮುಖ ದಿನಾಂಕಗಳ ಮಾಹಿತಿ

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20.11.2017 ಬೆಳಿಗ್ಗೆ 10.00 ಗಂಟೆಗೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08.12.2017 ಸಂಜೆ 06.00 ಗಂಟೆಗೆ
  • ಶುಲ್ಕವನ್ನು ಅಧಿಕೃತ ಬ್ಯಾಂಕ್ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 12.12.2017.

ಸಹಾಯವಾಣಿ

ಅಭ್ಯರ್ಥಿಗಳು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)-ಕೆ ಎಸ್ ಆರ್ ಪಿ-2017 ನೇಮಕಾತಿ ಸಹಾಯವಾಣಿ ಸಂಖ್ಯೆ. 080-22943346 ನ್ನು ಸಂಪರ್ಕಿಸಿ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸ್ಪಷ್ಠಪಡಿಸಿಕೊಳ್ಳಬಹುದು. (ದಿನಾಂಕ:20.11.2017ರಿಂದ ಪ್ರತಿದಿನ ಬೆಳಿಗ್ಗೆ 10-00 ರಿಂದ ಸಾಯಂಕಾಲ 6-00 ಗಂಟೆಯವರೆಗು)

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KARNATAKA STATE POLICE RECRUITMENT INVITES ONLINE APPLICATIONS FOR THE POST OF SPECIAL RESERVICE POLICE CONSTABLE(KSRP) (MEN)-2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X