ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC)ದಲ್ಲಿ 68 ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC)ದಲ್ಲಿ ಖಾಲಿ ಇರುವ 68 ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಇಲಾಖೆಯಲ್ಲಿ ಗ್ರೂಪ್ ಹೆಡ್ (2), ಟೀಮ್ ಲೀಡ್ (5), ಟೆಸ್ಟ್ ಲೀಡ್ (1), ಸೀನಿಯರ್ ಅನಾಲಿಸ್ಟ್ (20), ಅನಾಲಿಸ್ಟ್ (25), ಇಂಜಿನಿಯರ್ (5), ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ಸ್ (2), ಬ್ಯುಸಿನೆಸ್ ಕನ್ಸಲ್ಟೆಂಟ್ಸ್ (2), ಟ್ರೈನಿ (3) ಮತ್ತು ಅಪ್ರೆಂಟಿಸ್ (3) ಹುದ್ದೆಗಳಿಗೆ ನೇರ ನೇಮಕಾತಿ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನವೆಂಬರ್ 30,2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

68 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಎಸ್‌ಆರ್‌ಎಸ್‌ಎಸಿ

CRITERIA DETAILS
Name Of The Posts ಗ್ರೂಪ್ ಹೆಡ್, ಟೀಮ್ ಲೀಡ್, ಟೆಸ್ಟ್ ಲೀಡ್, ಸೀನಿಯರ್ ಅನಾಲಿಸ್ಟ್ , ಅನಾಲಿಸ್ಟ್, ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ಸ್, ಬ್ಯುಸಿನೆಸ್ ಕನ್ಸಲ್ಟೆಂಟ್ಸ್, ಟ್ರೈನಿ ಮತ್ತು ಅಪ್ರೆಂಟಿಸ್
Organisation ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC)
Educational Qualification ಪದವಿ; ಬಿ.ಇ/ಬಿ.ಟೆಕ್ ಇನ್ ಇಂಜಿನಿಯರಿಂಗ್
Job Location ಕರ್ನಾಟಕ
Salary Scale ಹುದ್ದೆಗಳಿಗನುಸಾರ ತಿಂಗಳಿಗೆ 10,000/- ರಿಂದ 2,25,000/- ರೂಗಳು
Application End Date November 30, 2019

ವಿದ್ಯಾರ್ಹತೆ:

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC)ದಲ್ಲಿ ನೇಮಕಾತಿ ಮಾಡಲಾಗುತ್ತಿರುವ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಖಾಲಿ ಹುದ್ದೆಗಳ ವಿವರ:

68 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಎಸ್‌ಆರ್‌ಎಸ್‌ಎಸಿ

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 10,000/- ರಿಂದ 2,25,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕದ ವಿವರ:

ಅರ್ಜಿ ಶುಲ್ಕದ ಬಗೆಗೆ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC)ದ ಅಧಿಕೃತ ವೆಬ್‌ಸೈಟ್‌ https://ksrsac.in/web/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2019ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka state remote sensing applications centre recruitment 2019 notification has been released on official website for the recruitment of 68 various posts. Interested candidates can apply through online before 30th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+