ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 3745 ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ, ದರ್ಜೆ-3 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಇಂತಿವೆ
ಚಾಲಕ: 1200 ಹುದ್ದೆಗಳು
ಚಾಲಕ-ಕಮ್ ನಿರ್ವಾಹಕ: 2545 ಹುದ್ದೆಗಳು
ಒಟ್ಟು: 3745 ಹುದ್ದೆಗಳು

ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಮಾರ್ಚ್ 20,2020ರೊಳಗೆ ಈ ಕೆಳಗಿನ ವಿದ್ಯಾರ್ಹತೆ ಮತ್ತು ಅರ್ಹತೆಗಳನ್ನು ಹೊಂದಿರಬೇಕಿರುತ್ತದೆ.
ಚಾಲಕ ಮತ್ತು ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮುಕ್ತ ವಿವಿಯಿಂದ ಪಡೆದ 500 ಅಂಕಗಳ ಎಸ್‌ಎಸ್‌ಸಿ ವಿದ್ಯಾರ್ಹತೆಯ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಯು ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ (HTV) ಚಾಲನಾ ಪರವಾನಿಗೆಯನ್ನು ಹೊಂದಿ ಕನಿಷ್ಠ 2 ವರ್ಷಗಳಾಗಿರಬೇಕು ಮತ್ತು ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್‌ವಿ ಬ್ಯಾಡ್ಜ್ ಹೊಂದಿರಬೇಕು.
ಇತರೆ ಅರ್ಹತೆಗಳು:
ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಮಾತ್ರ ಚಾಲ್ತಿಯಲ್ಲಿರುವ ನಿರ್ವಾಹಕ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ವಯೋಮಿತಿ:
ವಯೋಮಿತಿ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 24 ರಿಂದ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇಲಾಖಾ ಅಭ್ಯರ್ಥಿಗಳು ಅವರು ಸಲ್ಲಿಸಿರುವ ಸೇವಾವಧಿಯ ಗರಿಷ್ಟ 10 ವರ್ಷಗಳಿಗೆ ಮೀರದಂತೆ ವಯೋಮಿತಿ ರಿಯಾಯಿತಿಗೆ ಅರ್ಹರು ಆದರೆ ಅವರ ವಯಸ್ಸು 45 ವರ್ಷ ಮೀರಿರಬಾರದು.
ಮಾಜಿ ಸೈನಿಕ ಅಭ್ಯರ್ಥಿಯು ಭಾರತದ ಸಶಸ್ತ್ರ ಪಡೆಯಲ್ಲಿ ಕನಿಷ್ಟ 15 ವರ್ಷಗಳ ಸೇವೆ ಸಲ್ಲಿಸಿರುವ ಬಗ್ಗೆ ನಿಗಧಿತ ಡಿಸ್‌ಚಾರ್ಜ್ ಪ್ರಮಾಣ ಪತ್ರ ಹೊಂದಿರಬೇಕು ಮತ್ತು ಅವರು ಸಲ್ಲಿಸಿದ ಸೇವೆಯ ಜೊತೆಗೆ ಮೂರು ವರ್ಷಗಳ ವಯೋಮಿತಿ ರಿಯಾಯಿತಿಗೆ ಅರ್ಹರು ಆದರೆ ಅವರ ವಯಸ್ಸು 45 ವರ್ಷ ಮೀರಿರಬಾರದು.

ವೇತನದ ವಿವರ ಮತ್ತು ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿಯ ಚಾಲಕ ಮತ್ತು ಚಾಲಕ-ಕಂ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಚಾಲಕ ಹುದ್ದೆಗಳಿಗೆ ತಿಂಗಳಿಗೆ 10,000/-ರೂ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ತಿಂಗಳಿಗೆ 9,100/-ರೂ ವೇತನವನ್ನು ನೀಡಲಾಗುವುದು.ತರಬೇತಿ ಅವಧಿ ಪೂರೈಸಿದ ಬಳಿಕ ಅಭ್ಯರ್ಥಿಗಳಿಗೆ ತಿಂಗಳಿಗೆ 12,400/- ರಿಂದ 19,550/-ರೂ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಮತ್ತು ದಾಖಲಾತಿ ಪರಿಶೀಲನೆ ಮತ್ತು ಚಾಲನಾ ವೃತ್ತಿ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಗೆ ಒಮ್ಮೆ ಮಾತ್ರ ಅವಕಾಶ ನೀಡಲಾಗುವುದು. ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಡೆದ ಅಂಕಗಳನ್ನೇ ಎರಡೂ ಹುದ್ದೆಗಳ ಆಯ್ಕೆಗೆ ಪರಿಗಣಿಸಲಾಗುವುದು.
ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳು ಕ.ರಾ.ರ.ಸಾ.ನಿಗಮದ ವ್ಯಾಪ್ತಿಯಲ್ಲಿನ ವಿಭಾಗಗಳು ಮತ್ತು ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಘಟಕಗಳಿಗೆ ನಿಯೋಜಿಸಬಹುದಾಗಿರುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಯು ಅರ್ಜಿ ಸಲ್ಲಿಸಬಯಸುವ ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕ ಪರಿಗಣಿಸಲಾಗುವುದು.
ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ವರ್ಗ-1/ಮಾಜಿ ಸೈನಿಕ ಮತ್ತು ಅಶಕ್ತ ಮಾಜಿ ಸೈನಿಕರ ಅವಲಂಬಿತರು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಅಭ್ಯರ್ಥಿಯು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ನಿಂದ ಚಲನ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಶುಲ್ಕವನ್ನು ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಮಾತ್ರ ಇ-ಪೇಮೆಂಟ್ ಮೂಲಕ ಏಪ್ರಿಲ್ 2,2020ರೊಳಗೆ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು
ತಿರಸ್ಕರಿಸಲಾಗುವುದು. ಅಂಚೆ ಕಚೇರಿಯಲ್ಲಿ ಶುಲ್ಕ ಪಾವಿತಿಸಿದ ಮೂಲ ಚಲನ್ ಪ್ರತಿಯನ್ನು ದಾಖಲಾತಿ ಪರಿಶೀಲನಾ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.
ಬೇರೆ ಯಾವುದೇ ರೀತಿಯಲ್ಲಿ ಅರ್ಜಿ ಶುಲ್ಕ ಪಾವತಿಸಿದ್ದಲ್ಲಿ ಸದರಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಚಾಲಕ ಮತ್ತು ಚಾಲಕ- ಕಂ- ನಿರ್ವಾಹಕ ಎರಡೂ ಹುದ್ದೆಗಳಿಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡೂ ಹುದ್ದೆಗಳಿಗೂ ಒಂದೇ ಅರ್ಜಿ ಸಲ್ಲಿಸಿ ಎರಡೂ ಹುದ್ದೆಗಳ ಅರ್ಜಿ ಶುಲ್ಕ ಪಾವತಿಸುವುದು.

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಮುಖ ದಿನಾಂಕಗಳು:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ https://ksrtc.in/pages/kannada/recruitment.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 24,2020 ರಿಂದ ಮಾರ್ಚ್ 30,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ತಪ್ಪದೇ ಡೌನ್‌ಲೋಡ್ ಮಾಡಿದ ಪ್ರತಿಯನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಫೆಬ್ರವರಿ 24,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 30,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 2,2020
ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ