ಕರ್ನಾಟಕ ಪ್ರವಾಸೋದ್ಯಮ ಇಲಾಖೆ 38 ಡಿಟಿಸಿ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಕನಿಷ್ಟ 25 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 50,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ktilrecruitment@gmail.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts