ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ರಿಸರ್ಚ್ ಅಸಿಸ್ಟೆಂಟ್ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ವಿದ್ಯಾರ್ಹತೆ:
ಎಂ.ಎ, ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಪ್ರೆಂಟಿಶಿಪ್ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000/-ರೂ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,300/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.
ಕಚೇರಿ ವಿಳಾಸ:
Dr. S. C Natikar,
Principal investigator,
department of karnataka university,
dharwad -580003.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.