ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಡೆಪ್ಯುಟಿ ಜನರಲ್ ಮ್ಯಾನೇಜರ್ (ಐಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಇ, ಎಂ.ಟೆಕ್ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kuidfc.com/ ಗೆ ಭೇಟಿ ನೀಡಿ.ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 20,2020ರ ಸಂಜೆ 5ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











