ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ 30 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 15,2021 ರಿಂದ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 6,2022ರ ವರೆಗೆ ವಿಸ್ತರಿಸಲಾಗಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
KUIDFC ನೇಮಕಾತಿ 2021 ವಿದ್ಯಾರ್ಹತೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ 12ನೇ ತರಗತಿ, ಪದವಿ, ಬಿ.ಇ, ಬಿ.ಕಾಂ, ಬಿಬಿಎಂ, ಪಿಯುಸಿ, ಎಂಬಿಎ, ವಿದ್ಯಾರ್ಹತೆಯನ್ನು ಹೊಂದಿರಬೇಕು.
KUIDFC ನೇಮಕಾತಿ 2021 ವಯೋಮಿತಿ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 62 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.
KUIDFC ನೇಮಕಾತಿ 2021 ವೇತನ ವಿವರ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ ಇಲ್ಲಿದೆ. ಅಧೀಕ್ಷಕರ ಅಭಿಯಂತರರು, ಪ್ರಧಾನ ವ್ಯವಸ್ಥಾಪಕರು - 1,08,852/-ರೂ ಕಾರ್ಯನಿರ್ವಾಹಕ ಅಭಿಯಂತರರು, ಉಪ ಪ್ರಧಾನ ವ್ಯವಸ್ಥಾಪಕರು - 83,244/-ರೂ ಸಹಾಯಕ ಪ್ರಧಾನ ವ್ಯವಸ್ಥಾಪಕರು - 77,206/-ರೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಪ್ರಧಾನ ವ್ಯವಸ್ಥಾಪಕರು -77,206/-ರೂ ಸಾರ್ವಜನಿಕ ಸಂಪರ್ಕ ಅಧಿಕಾರಿ, ವ್ಯವಸ್ಥಾಪಕರು - 66,512/-ರೂ ಸಹಾಯಕ ಅಭಿಯಂತರರು, ಉಪ ವ್ಯವಸ್ಥಾಪಕರು - 63,311/-ರೂ ಲೆಕ್ಕಪತ್ರ ಅಧೀಕ್ಷಕರು, ಸಹಾಯಕ ವ್ಯವಸ್ಥಾಪಕರು - 60,110/-ರೂ ಲೆಕ್ಕಿಗ, ಹಿರಿಯ ಕಾರ್ಯನಿರ್ವಾಹಕ ಸಹಾಯಕರು - 55,645/-ರೂ ಲೆಕ್ಕ ಸಹಾಯಕರು, ಕಾರ್ಯನಿರ್ವಾಹಕ ಸಹಾಯಕರು - 40,731/-ರೂ ಡಿಇಒ/ಕಂಪ್ಯೂಟರ್ ಆಪರೇಟರ್, ಕಿರಿಯ ಕಾರ್ಯನಿರ್ವಾಹಕ ಸಹಾಯಕರು - 31,637/-ರೂ
KUIDFC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
KUIDFC ನೇಮಕಾತಿ 2021 ಅರ್ಜಿ ಶುಲ್ಕ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
KUIDFC ನೇಮಕಾತಿ 2021 ಅರ್ಜಿ ಸಲ್ಲಿಕೆ :
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kuidfc.com/ENG/index.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 15,2021 ರಿಂದ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಲು ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಜನವರಿ 6,2022ರ ವರೆಗೆ ವಿಸ್ತರಿಸಲಾಗಿದೆ. ಖುದ್ದಾಗಿ/ಅಂಚೆ/ಕೊರಿಯರ್ ಮೂಲಕಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











