ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ 10 ಸ್ಟೆನೋಗ್ರಾಫರ್, ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 29ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಸಿಎ/ಐಸಿಡಬ್ಲ್ಯೂಎ, ಎಂ.ಕಾಂ, ಎಂಬಿಎ, ಬಿ.ಕಾಂ, ಬಿಬಿಎಂ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 31,044/-ರಿಂದ 89,822/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ನೇಮಕಾತಿ ವಿಧಾನ:
ವಿದ್ಯಾರ್ಹತೆ, ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kuidfc.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











