ಕುವೆಂಪು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ

ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅವಶ್ಯವಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ಚಾನಿಸಲಾಗಿದೆ.

ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಡುವ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ, ಶಿವಮೊಗ್ಗದ ಸಹ್ಯಾದ್ರಿ ಮತ್ತು ಕಡೂರಿನ ಸ್ನಾತಕೋತ್ತರ ಕೇಂದ್ರಗಳಲ್ಲಿ ಅತಿಥಿ ಉಪನ್ಯಾಸಕರುಗಳ ಹುದ್ದೆಗಳು ಖಾಲಿ ಇವೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ಸಂಬಂಧಿಸಿದ ವಿಷಯದ ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು ಹಾಗೂ ಯುಜಿಸಿ ನಿಯಮಾನುಸಾರ ಶೇ.55 ಅಂಕಗಳನ್ನು ಹೊಂದಿರಬೇಕು.

ಎನ್ಇಟಿ/ಎಸ್ಎಲ್ಇಟಿ ಅಥವಾ ಪಿಹೆಚ್.ಡಿ ಪದವಿಯನ್ನು ಹೊಂದಿದ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.

 ಅತಿಥಿ ಉಪನ್ಯಾಸಕರ ನೇಮಕಾತಿ

 

ಅರ್ಜಿ ಸಲ್ಲಿಕೆ

 • ನಿಗದಿತ ಅರ್ಜಿ ನಮೂನೆಗಳನ್ನು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.kuvempu.ac.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
 • ವಿಶ್ವವಿದ್ಯಾಲಯದ ಕಾಲೇಜುಗಳು ಸೇರಿದಂತೆ ಒಂದಕ್ಕಿಂದ ಹೆಚ್ಚು ಘಟಕಗಳಿಗೆ ಅರ್ಜಿ ಸಲ್ಲಿಸುವುದಾದಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸುವುದು.
 • ಈ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿರುವವರು ಸಹ ಪುನಃ ಅರ್ಜಿ ಸಲ್ಲಿಸತಕ್ಕದ್ದು.
 • ವಿದ್ಯಾರ್ಹತೆ ಹಾಗೂ ಜಾತಿ/ವರ್ಗ ಪ್ರಮಾಣ ಪತ್ರಗಳಿಗೆ ಸಂಬಂಧಪಟ್ಟ ಅಧಿಕೃತ ದಾಖಲಾತಿಗಳ ದೃಢೀಕರಣದ ಪ್ರತಿಗಳನ್ನು ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಬೇಕು.
 • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಅಧ್ಯಯನ ವಿಭಾಗಗಳ ಅಧ್ಯಕ್ಷರು/ ಸ್ನಾತಕೋತ್ತರ ಕೇಂದ್ರ/ ಕಾಲೇಜುಗಳ ಪ್ರಾಂಶುಪಾಲರುಗಳ ವಿಳಾಸಕ್ಕೆ ದಿನಾಂಕ: 31-05-2017 ರಂದು ಸಂಜೆ 4:00 ರೊಳಗೆ ತಲುಪುವಂತೆ ಕಳುಹಿಸುವುದು.
 • ಅರ್ಜಿ ಸಲ್ಲಿಸುವ ಲಕೋಟೆಯ ಮೇಲೆ ಯಾವ ವಿಷಯದ ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಲಾಗಿದೆ ಎನ್ನುವುದುನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು.

ಅರ್ಜಿ ಸಲ್ಲಿಕೆ ಮತ್ತು ಅಧಿಸೂಚನೆಯ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2017 ರಂದು ಸಂಜೆ 4:00

  ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.150/-
  • ಪ.ಜಾ/ಪ.ಪಂ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.75/-
  • ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
  • ಅರ್ಜಿ ಶುಲ್ಕದ ಡಿ.ಡಿ.ಯನ್ನು ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಇವರ ಹೆಸರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಪಡೆದು ಪಾವತಿಯಾಗುವಂತೆ ಸಲ್ಲಿಸುವುದು.

  ವಿಶೇಷ ಸೂಚನೆ

  ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಪ್ರತ್ಯೇಕ ಪತ್ರಗಳನ್ನು ಕಳುಹಿಸಲಾಗುವುದಿಲ್ಲ. ಸಂದರ್ಶನ ದಿನಾಂಕ ಮತ್ತು ಇತರೆ ಮಾಹಿತಿಗಳಿಗೆ ವಿಶ್ವವಿದ್ಯಾಲಯದ ವೆಬ್ಸೈಟ್ www.kuvempu.ac.in ಗಮನಿಸಲು ಸೂಚಿಸಲಾಗಿದೆ.

  For Quick Alerts
  ALLOW NOTIFICATIONS  
  For Daily Alerts

  English summary
  Applications are invited from eligible Candidates for available Guest Faculty positions available as shown below in various post graduate departments in kuvempu university
  --Or--
  Select a Field of Study
  Select a Course
  Select UPSC Exam
  Select IBPS Exam
  Select Entrance Exam
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X