Kuvempu University Recruitment 2020: ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುವೆಂಪು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ, ಕಡೂರು/ಚಿಕ್ಕಮಗಳೂರು ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಘಟಕ / ನೇರ ಆಡಳಿತಕ್ಕೊಳಪಟ್ಟ ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರುಗಳ ಸೇವೆಯನ್ನು ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಟ್ಟು 286 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ದಿನಾಂಕಗಳನ್ನು ತಿಳಿಯಲು ಮುಂದೆ ಓದಿ.

286 ಅತಿಥಿ ಉಪನ್ಯಾಸಕರ ನೇಮಕಾತಿ..ಆ.31ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು ಹಾಗೂ ಯುಜಿಸಿ ನಿಯಮಾನುಸಾರ ಶೇ.೫೫ ಅಂಕಗಳನ್ನು ಹೊಂದಿರಬೇಕು.

ಎನ್‌.ಇ.ಟಿ/ಎಸ್.ಎಲ್.ಇ.ಟಿ/ಪಿ.ಹೆಚ್.ಡಿ ಪದವಿಯನ್ನು ಹಾಗೂ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಬೋಧನಾನುಭವ ಹೊಂದಿದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಈ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದ ಸಂದರ್ಭದಲ್ಲಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಬೋಧನಾ ಅನುಭವಗಳನ್ನು ಪಡೆದಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

286 ಅತಿಥಿ ಉಪನ್ಯಾಸಕರ ನೇಮಕಾತಿ..ಆ.31ರೊಳಗೆ ಅರ್ಜಿ ಹಾಕಿ

ವೇತನದ ವಿವರ:

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ದಿನಾಂಕ ಮತ್ತು ಇತರೆ ಮಾಹತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 200/-ರೂ ಮತ್ತು ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಚಲನ್ ಮೂಲಕ ಪಾವತಿಸಬಹುದು. ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

286 ಅತಿಥಿ ಉಪನ್ಯಾಸಕರ ನೇಮಕಾತಿ..ಆ.31ರೊಳಗೆ ಅರ್ಜಿ ಹಾಕಿ

 

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ -577 451 ಇವರ ವಿಳಾಸಕ್ಕೆ ಆಗಸ್ಟ್ 31,2020ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಹಾಗೂ ಅಂಚೆಯಲ್ಲಿನ ವಿಳಂಬವನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ...... ವಿಷಯದ ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಲಾಗಿದೆ ಎಂಬುದನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Kuvempu universtiy going to recruitment 286 guest faculty posts. Interested candidates can apply before August 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X