ಕುವೆಂಪು ವಿಶ್ವವಿದ್ಯಾಲಯವು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 7,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ:
ಬಯೋಕೆಮಿಸ್ಟ್ರಿಯಲ್ಲಿ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಫೆಲೋಶಿಪ್:
ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 14,000/-ರೂ ಫೆಲೋಶಿಪ್ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 7,2020ರಂದು ಮಧ್ಯಾಹ್ನ 12:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.