ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ 19 ಚಾಲಕರ ನೇಮಕಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು 19 ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಗಸ್ಟ್ 20,2019 ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

10ನೇ ತರಗತಿ ಪಾಸ್ ಆಗಿದ್ದೀರಾ….ಹಾಗಿದ್ದರೆ ಈ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ

CRITERIA DETAILS
Name Of The Posts ಚಾಲಕ
Organisation ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ
Educational Qualification ಎಸ್‌ಎಸ್ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 21,000/- ರಿಂದ 42,000/-ರೂ
Application Start Date August 10, 2019
Application End Date August 20, 2019

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡ ಅಥವಾ ತತ್ಸಮಾನ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ಆಗಸ್ಟ್ 20,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ,2ಬಿ,3ಎ ಮತ್ತು 3ಬಿಯ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,000/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಚಾಲನಾ ಪರೀಕ್ಷೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪರಿಶಿಷ್ಟ ಪಂಗಡ,ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 50/-ರೂ ಮತ್ತು ಇತರೆ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ https://kuwsdb.org/ ಗೆ ಹೋಗಿ ನಿಗಧಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ. ನಂತರ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 20,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ,
ನಂ.5 ಮತ್ತು 6, ಜಲ ಭವನ.
ಬಿ.ಟಿ.ಎಂ ಲೇಔಟ್,1ನೇ ಘಟ್ಟ, 1ನೇ ಹಂತ,
ಬನ್ನೇರುಘಟ್ಟ ಮುಖ್ಯ ರಸ್ತೆ,
ಬೆಂಗಳೂರು 560029

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
KUWSDB Recruitment 2019-20:Apply Offline for 19 Drivers vacancies. Karnataka Urban Water Supply and Drainage Board (KUWSDB) invited applications from eligible and interested candidates to fill up Drivers Posts through KUWSDB official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+