ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಮುಖ್ಯ ತಂತ್ರಜ್ಞಾನ ಅಧಿಕಾರಿ ಮತ್ತು ಮಾಹಿತಿ ಭದ್ರತಾ ಲೆಕ್ಕ ಪರಿಶೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಜುಲೈ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
| CRITERIA | DETAILS |
| Name Of The Posts | ಮುಖ್ಯ ತಂತ್ರಜ್ಞಾನ ಅಧಿಕಾರಿ ಮತ್ತು ಮಾಹಿತಿ ಭದ್ರತಾ ಲೆಕ್ಕ ಪರಿಶೋಧಕ |
| Organisation | ಕರೂರ್ ವೈಶ್ಯ ಬ್ಯಾಂಕ್ |
| Educational Qualification | ಇಂಜಿನಿಯರಿಂಗ್‌ನಲ್ಲಿ ಪದವಿ / ಎಂಸಿಎ ,ಯಾವುದೇ ಪದವಿ |
| Job Location | ಭಾರತದೆಲ್ಲೆಡೆ |

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಎಂಸಿಎ ಮತ್ತು ಯಾವುದೇ ಪದವಿಯನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗೆಗನುಸಾರ ಗರಿಷ್ಟ 50 ಮತ್ತು 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕೆವಿ ಬ್ಯಾಂಕ್ ನಿಯಮಾನುಸಾರ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://www.kvb.co.in/ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಜುಲೈ 5,2019ರೊಳಗೆ ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











