KVIC Recruitment 2020: 34 ನಿರ್ದೇಶಕ ಮತ್ತು ಉಪ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 34 ನಿರ್ದೇಶಕ ಮತ್ತು ಉಪ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಉದ್ಯೋಗಾವಕಾಶ...ಡಿ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ನಿರ್ದೇಶಕ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಉಪ ನಿರ್ದೇಶಕ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 78,800/-ರೂ ಮತ್ತು ಉಪ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿ ಅನುಭವದ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kvic.gov.in/kvicres/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020ರ ರಾತ್ರಿ 11 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Khadi and village industries commission (KVIC) recruitment 2020 notification has been released for 34 director and deputy director posts. Interested candidates can apply through online before December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X