ಲಕ್ಷ್ಮೀ ವಿಲಾಸ್ ಬ್ಯಾಂಕ್: ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Posted By:

ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾಗಿರುವ ತಮಿಳುನಾಡು ಮೂಲದ ಲಕ್ಷ್ಮೀ ವಿಲಾಸ್ ಬ್ಯಾಂಕ್ (ಎಲ್ ವಿ ಬಿ) ಖಾಲಿ ಇರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 17-04-2017 ರೊಳಗೆ ಅನ್-ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಕನಿಷ್ಠ ಶೇ.60 ಅಂಕಗಳೊಂದಿಗೆ ಪಡೆದುಕೊಂಡಿರಬೇಕು. ಅಂತಿಮ ಪದವಿಯಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ವಯೋಮಿತಿ

ಕನಿಷ್ಠ 20 ವರ್ಷದಿಂದ ಗರಿಷ್ಠ 30 ವರ್ಷ (1987 ಮಾರ್ಚ್ 02 ರಿಂದ 1997 ಮಾರ್ಚ್ 01 ರೊಳಗೆ ಜನಿಸಿರುವವರು ಅರ್ಜಿ ಸಲ್ಲಿಸಬಹುದು)

ಲಕ್ಷ್ಮೀ ವಿಲಾಸ್ ಬ್ಯಾಂಕ್: ಪ್ರೊಬೇಷನರಿ ಆಫೀಸರ್ ಹುದ್ದೆ

ನೇಮಕಾತಿ ವಿಧಾನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಗುಂಪು ಚರ್ಚೆಗೆ ಕರೆಯಲಾಗುತ್ತದೆ. ಇದರಲ್ಲಿ ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ನಂತರ ಅಂತಿಮ ಆಯ್ಕೆ ನಡೆಯಲಿದೆ.

ಪರೀಕ್ಷಾ ವಿವರ

ನ್ಯುಮೆರಿಕ್ ಎಲಿಜಿಬಿಲಿಟಿ- 25 ಪ್ರಶ್ನೆಗಳು
ಅನಾಲಿಟಿಕಲ್ ಎಲಿಜಿಬಿಲಿಟಿ-25 ಪ್ರಶ್ನೆಗಳು
ವರ್ಬಲ್ ಎಲಿಜಿಬಿಲಿಟಿ-30 ಪ್ರಶ್ನೆಗಳು
ಬ್ಯಾಂಕಿಂಗ್ ಅವೇರ್ನೆಸ್- 40 ಪ್ರಶ್ನೆಗಳು
ಕಂಪ್ಯೂಟರ್ ಸಾಮಾನ್ಯ ಜ್ಞಾನ-30 ಪ್ರಶ್ನೆಗಳು

ಸ್ಪರ್ಧಾತ್ಮಕ ಪರೀಕ್ಷೆಯು ಆನ್-ಲೈನ್ ಮೂಲಕ ನಡೆಯಲಿದ್ದು ಒಟ್ಟು 150 ಪ್ರಶ್ನೆಗಳು ಕೇಳಲಾಗುತ್ತದೆ. ಉತ್ತರಿಸಲು 90 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು

ಕರ್ನಾಟಕದಲ್ಲಿ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶವಿದೆ.

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಗಳನ್ನು ಲಕ್ಷ್ಮೀವಿಲಾಸ್ ಬ್ಯಾಂಕ್ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು.

ಅರ್ಜಿ ಶುಲ್ಕ: ರೂ.650 /-
ತಾತ್ಕಾಲಿಕವಾಗಿ ನಿಗದಿಪಡಿಸಲಾದ ಪರೀಕ್ಷಾ ತಿಂಗಳು ಮೇ-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-04-2017
ಹೆಚ್ಚಿನ ಮಾಹಿತಿಗಾಗಿ: www.lvbank.com ಗಮನಿಸಿ

ಲಕ್ಷ್ಮೀ ವಿಲಾಸ್ ಬ್ಯಾಂಕ್

1926 ರಲ್ಲಿ ಸ್ಥಾಪಿತವಾದ ತಮಿಳುನಾಡಿನ ಲಕ್ಷ್ಮೀ ವಿಲಾಸ್ ಬ್ಯಾಂಕ್ 9 ದಶಕಗಳಿಂದ ದೇಶಾದ್ಯಂತ ಬ್ಯಾಂಕಿಂಗ್ ಸೇವೆ ನೀಡುತ್ತಿದೆ. 500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವ ಬ್ಯಾಂಕ್ 965 ಎಟಿಎಂ ಗಳನ್ನು ಹೊಂದಿದೆ. ದಕ್ಷಿಣ ಭಾರತದಲ್ಲಿ ಹೆಚ್ಚು ಶಾಖೆ ಮತ್ತು ಗ್ರಾಹಕರನ್ನು ಹೊಂದಿದ್ದು ವರ್ಷದಿಂದ ವರ್ಷಕ್ಕೆ ತನ್ನ ಶಾಖೆಗಳನ್ನು ವಿಸ್ತರಿಸುತ್ತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.

English summary
The Bank invites application for the position of Probationary Officers for Pan India operations.The applicants are requested to apply online only through careers.lvbank.com on or before April 17, 2017.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia