
ಎಲ್‌ಐಸಿ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ 6 ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಜನವರಿ 1,2021ರ ಅನ್ವಯ ಕನಿಷ್ಟ 23 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಲ್ಲಿಸಬಹುದು.
ವೇತನ:
ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ವೆಬ್‌ಸೈಟ್ https://www.lichousing.com/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











