ಭಾರತೀಯ ಜೀವ ವಿಮಾ ನಿಗಮ 8,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿತ್ತು. ಭಾರತದೆಲ್ಲೆಡೆ ಎಲ್‌ಐಸಿ ಶಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.
ವಿದ್ಯಾರ್ಹತೆ ಏನಿರಬೇಕು ? :
ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಎಷ್ಟಿರಬೇಕು ? :
ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,435/- ರಿಂದ 40,080/-ರೂ ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ? :
ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ ಎಷ್ಟು ? :
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 510/-ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 85/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ ? :
ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ https://www.licindia.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 17.9.2019
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1.10.2019
ಆನ್‌ಲೈನ್ ಪರೀಕ್ಷೆ ದಿನಾಂಕ-ಪ್ರಿಲಿಮಿನರಿ : 21 ಮತ್ತು 22ರ ಅಕ್ಟೋಬರ್ 2019
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











