ಭಾರತೀಯ ಜೀವ ವಿಮಾ ನಿಗಮ 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ |
| Organisation | ಭಾರತೀಯ ಜೀವ ವಿಮಾ ನಿಗಮ |
| Educational Qualification | ಬಿ.ಇ/ಬಿ.ಟೆಕ್, ಬಿ.ಆರ್ಕ್,ಎಂ.ಟೆಕ್/ಎಂ.ಇ, ಪದವಿ, ಸ್ನಾತಕೋತ್ತರ ಪದವಿ, ಎಂ.ಎಸ್ಸಿ/ಎಂಸಿಎ, |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 57,000/-ರೂ |
| Application Start Date | February 25, 2020 |
| Application End Date | March 15, 2020 |
ಹುದ್ದೆಗಳ ವಿವರ:
ಸಹಾಯಕ ಇಂಜಿನಿಯರ್- 50 ಹುದ್ದೆಗಳು
ಸಹಾಯಕ ಆಡಳಿತಾಧಿಕಾರಿ- 168
ಒಟ್ಟು -218 ಹುದ್ದೆಗಳು
ವಿದ್ಯಾರ್ಹತೆ:
ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಬಿ.ಆರ್ಕ್,ಎಂ.ಟೆಕ್/ಎಂ.ಇ, ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂ.ಎಸ್ಸಿ/ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಫೆಬ್ರವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ (ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ) ಅಭ್ಯರ್ಥಿಗಳಿಗೆ 15ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಭಾರತೀಯ ಜೀವ ವಿಮಾ ನಿಗಮ ನೇಮಕಾತಿಯ ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಅಭ್ಯರ್ಥಿಗಳು 85/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾರ್ಚ್ 15,2020ರೊಳಗೆ ಪಾವತಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25,2,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15,3,2020
ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪಡೆಯುವ ದಿನಾಂಕ: 27,3,2020 ರಿಂದ 4,4,2020
ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕ: 4,4,2020
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ https://www.licindia.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











