ಭಾರತೀಯ ಜೀವ ವಿಮಾ ನಿಗಮ ನೇಮಕಾತಿ 8581 ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಎಲ್‌ಐಸಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ |
| Organisation | ಭಾರತೀಯ ಜೀವ ವಿಮಾ ನಿಗಮ |
| Educational Qualification | ಪದವಿ |
| Job Location | ಭಾರತದೆಲ್ಲೆಡೆ |
| Salary Scale | ತಿಂಗಳಿಗೆ 21,865/- ರಿಂದ 55,075/-ರೂ |
| Application Start Date | May 20, 2019 |
| Application End Date | June 9, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,865/- ರಿಂದ 55,075/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 50/-ರೂ ವೇತನವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ :
ಭಾರತೀ ಜೀವ ವಿಮಾ ಇಲಾಖೆಗಳಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.licindia.in/ ಗೆ ಹೋಗಿ ಹುದ್ದೆಗಳ ಬೆಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











