ಲೋಕಸಭಾ ಸಚಿವಾಲಯ ನೇಮಕಾತಿ 2019: 21 ಸಂಸದೀಯ ವರದಿಗಾರ ಹುದ್ದೆಗಳ ನೇಮಕಾತಿ..ತಿಂಗಳಿಗೆ 1,7 ಲಕ್ಷ ವೇತನ

ಲೋಕಸಭಾ ಸಚಿವಾಲಯ ನೇಮಕಾತಿ ವಿಭಾಗವು 21 ಸಂಸದೀಯ ವರದಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

21  ಸಂಸದೀಯ ವರದಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ...ಜ.28ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಸಂಸದೀಯ ವರದಿಗಾರ
Organisation ಲೋಕಸಭಾ ಸಚಿವಾಲಯ
Educational Qualification ಯಾವುದೇ ಪದವಿ
Job Location ದೆಹಲಿ
Salary Scale ತಿಂಗಳಿಗೆ 56,100/- ರಿಂದ 1,77,500/-ರೂ
Application Start Date December 20, 2019
Application End Date January 28, 2020

ವಿದ್ಯಾರ್ಹತೆ:

ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನುಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಸಂಸದೀಯ ವರದಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಶೀಘ್ರಲಿಪಿ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಕಟಣೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆ ಪ್ರಕಾರ ಟೈಪ್‌ ಮಾಡಿದ ಅಥವಾ ಪ್ರಿಂಟೆಡ್‌ ಮಾದರಿ ಅರ್ಜಿಯನ್ನು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ
ಜನವರಿ 28,2020ರೊಳಗೆ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:

The Recruitment Branch,
Lok Sabha Secretariat,
Room No.521, Parliament House Annexe,
New Delhi-110001.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Lok sabha recruitment 2019 notification has been released on official website for the recruitment of 21 parliamentary reporter posts. Interested candidates can apply before 28th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+