ಲಿಕ್ವಿಡ್ ಪ್ರಾಪಲ್ಷನ್ ಸಿಸ್ಟ್ಸ್ಂ ಸೆಂಟರ್ (ಎಲ್‌ಪಿಎಸ್ಸಿ) 7 ಸೈಂಟಿಸ್ಟ್ ಅಥವಾ ಇಂಜಿನಿಯರ್ 'ಎಸ್‌ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ನವೆಂಬರ್ 9,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಗಳು ಅರ್ಜಿ ಸಲ್ಲಿಸಬಹುದು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.lpsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 9,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











