Mandya District Court Recruitment 2021: 8 ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದಲ್ಲಿ ಖಾಲಿ ಇರುವ 8 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ..ಏ.3ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣತೆ ಹಾಗೂ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ಶ್ರೇಣಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

15 ನಿಮಿಷಗಳ ಉಕ್ತಲೇಖನನ್ನು ಬೆರಳಚ್ಚುಪಡಿಸತಕ್ಕದ್ದು. ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 200/-ರೂ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://districts.ecourts.gov.in/mandya ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅಧಿಸೂಚನೆಯಲ್ಲಿ ಅರ್ಜಿ ನಮೂನೆಯನ್ನು ತೆಗೆದುಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 3,2021 ಸಂಜೆ 4 ಗಂಟೆಯೊಳಗೆ ಮಂಡ್ಯ ಜಿಲ್ಲಾ ನ್ಯಾಯಾಲಯ ಕಚೇರಿಯಲ್ಲಿ ಸಲ್ಲಿಸತಕ್ಕದ್ದು.

ಕಚೇರಿ ವಿಳಾಸ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಜಿಲ್ಲಾ ಮತ್ತು ಸತ್ರ ನ್ಯಾಲಯ,
ಮಂಡ್ಯ ಜಿಲ್ಲೆ,
ಮಂಡ್ಯ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mandya district court recruitment 2021 notification has been released for 8 typist posts. Interested candidates can apply before April 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+