ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಮಂಡ್ಯದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯದಲ್ಲಿ ಒಟ್ಟು 18 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಕ್ಟೋಬರ್ 11 ರೊಳಗೆ ಸಲ್ಲಿಸತಕ್ಕದ್ದು.

ಮಂಡ್ಯದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.

ಒಟ್ಟು 18 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಕ್ಟೋಬರ್ 11 ರೊಳಗೆ ಸಲ್ಲಿಸತಕ್ಕದ್ದು.

ಚಿತ್ರದುರ್ಗ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಚಿತ್ರದುರ್ಗ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಶೀಘ್ರಲಿಪಿಗಾರ (Stenographer)

ಹುದ್ದೆಗಳ ಸಂಖ್ಯೆಃ 10
ವೇತನ ಶ್ರೇಣಿ: ರೂ.14550-26700/- ಹಾಗೂ ಇತರ ಭತ್ಯೆಗಳೊಂದಿಗೆ

ಮಂಡ್ಯ ನ್ಯಾಯಾಲಯದಲ್ಲಿ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು,ಉಕ್ತಲೇಖನವನ್ನು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಬೆರಳಚ್ಚುಗಾರ (Typist)

ಹುದ್ದೆಗಳ ಸಂಖ್ಯೆ: 12
ವೇತನ ಶ್ರೇಣಿ: ರೂ.11600-21000/- ಹಾಗೂ ಇತರ ಭತ್ಯೆಗಳೊಂದಿಗೆ.

ಬೆರಳಚ್ಚು ನಕಲುಗಾರರು (Typist-copyist)

ಹುದ್ದೆಗಳ ಸಂಖ್ಯೆ: 03
ವೇತನ ಶ್ರೇಣಿ: ರೂ.11600-21000/- ಹಾಗೂ ಇತರ ಭತ್ಯೆಗಳೊಂದಿಗೆ.

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನುಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ವಯೋಮಿತಿ

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,

ಗರಿಷ್ಠ ವಯೋಮಿತಿ
ಸಾಮಾನ್ಯ ವರ್ಗ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಬೆರಳಚ್ಚು ಮಾಡಿಸಿ ಅಥವಾ ಗಣಕೀಕೃತ ಮಾಡಿಸಿ ತನ್ನ ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಭಾವಚಿತ್ರ ಮತ್ತು ಸೂಕ್ತ ದಾಖಲೆಗಳ ಪ್ರತಿಯನ್ನು ಲಗತ್ತಿಸತಕ್ಕದ್ದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಃ 11-10-2017, ಸಂಜೆ 5-00 ಘಂಟೆ

ಅರ್ಜಿ ಸಲ್ಲಿಸಬೇಕಾದ ವಿಳಾಸ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
MANDYA DISTRICT COURT RECRUITMENT NOTIFICATION FOR THE POST OF STENOGRAPHERS, TYPIST AND TYPIST-COPYIST FOR THE YEAR-2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X