Revenue Department Recruitment 2020: 54 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಏಪ್ರಿಲ್ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 54 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಗ್ರಾಮ ಲೆಕ್ಕಿಗ
Organisation ಕಂದಾಯ ಇಲಾಖೆ
Educational Qualification ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ
Job Location ಮಂಡ್ಯ (ಕರ್ನಾಟಕ)
Salary Scale ತಿಂಗಳಿಗೆ ರೂ.21,400/- ರಿಂದ 42,000/-ರೂ
Application Start Date March 18, 2020
Application End Date April 18, 2020

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ:

ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಏಪ್ರಿಲ್ 22,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಮಂಡ್ಯ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://mandya.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Mandy district revenue department recruitment 2020 notification has been released on official website for the recruitment of 54 village accountant posts. Interested candidates can apply through online before 18th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+