ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ, ಇಲ್ಲಿ 10 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್/ಎಂಬಿಎ ಪದವಿಗಳಲ್ಲಿ ಸಂಬಂಧಿಸಿದ ವಿಷಯಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಹಾಗೂ ಪಿಹೆಚ್.ಡಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳಂತೆ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನದ ವಿವರ:
ಎಐಸಿಟಿಇ ನಿಯಮಾವಳಿ ಪ್ರಕಾರ ಹಾಗೂ ಪಿಇಟಿ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ:
ಅರ್ಹ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ನಗದು ವಿಭಾಗದಲ್ಲಿ ಅಥವಾ ಪ್ರಾಂಶುಪಾಲರು, ಪಿಇಎಸ್ ಇಂಜಿನಿಯರಿಂಗ್ ಕಾಲೇಜು, ಮಂಡ್ಯ ರವರ ಹೆಸರಿನಲ್ಲಿ ಡಿ.ಡಿ ಮೂಲಕ ಪಾವತಿಸಿ ಅರ್ಜಿ ನಮೂನೆಯನ್ನು ಪಡೆದು ಮಾರ್ಚ್ 10,2021ರಂದು ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಡನೆ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಖುದ್ದು ಅಥವಾ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸುವಾಗ ಅಭ್ಯರ್ಥಿಗಳು ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ಕಛೇರಿಯ ವಿಳಾಸ:
ಪ್ರಾಂಶುಪಾಲರು,
ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜು,
ಮಂಡ್ಯ-571401.
ಅಧಿಕೃತ ವೆಬ್‌ಸೈಟ್: http://www.pescemandya.org/
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











