ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಪೌರ ಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ದಕ್ಷಿಣ ಕನ್ನಡ ಅಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ವೆಬ್‌ಸೈಟ್ http://dakshinakannadadudc.mrc.gov.in/ ಅಥವಾ https://dk.nic.in/ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್ http://mangalurucity.mrc.gov.in/ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
ವಯೋಮಿತಿ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಸಾಮಾನ್ಯ ವರ್ಗ ಮತ್ತು ಇತರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಟ ವಯೋಮಿತಿ 45 ವರ್ಷದೊಳಗಿರಬೇಕು.
ವೇತನ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರ ಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳು 100/-ರೂ ಮತ್ತು ಇತರರು 200/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ ನಲ್ಲಿ ಲಭ್ಯವಿರುವ ಪಿಡಿಎಫ್ ಚಲನ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡತಕ್ಕದ್ದು. ಶುಲ್ಕ ಪಾವತಿಸಿದ ನಂತರ ಚಲನ್ ನ ಪ್ರತಿಯನ್ನು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಇತರರ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬಹುದು.
ಆಯ್ಕೆ ಪ್ರಕ್ರಿಯೆ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕ ಹುದ್ದೆಗಳ ನೇಮಕಾತಿಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಮಾತ್ರ ಸೀಮಿತಗೊಳಿಸಲಾಗುವುದು. ಹಾಗೂ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಹೊರಗುತ್ತಿಗೆ/ಇತರೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಕೆ :
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 7,2021 ರಿಂದ ನವೆಂಬರ್ 23,2021ರೊಳಗೆ ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಸುವ ವೇಳೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ಮತ್ತು ಶುಲ್ಕ ಪಾವತಿಸಿದ ಚಲನ್ ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡತಕ್ಕದ್ದು. ಕೊನೆಯ ದಿನಾಂಕದ ನಂತರ ಹಾಕಿದ ಅರ್ಜಿಯನ್ನು ಮತ್ತು ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











