ಫೆಬ್ರವರಿ 16 ರಂದು ಮಂಗಳೂರು ಬೃಹತ್ ಉದ್ಯೋಗ ಮೇಳ

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ.

ಮಂಗಳೂರು ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 16 ರಂದು " ಮಂಗಳೂರು ಬೃಹತ್ ಉದ್ಯೋಗ ಮೇಳ" ಹಮ್ಮಿಕೊಳ್ಳಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಈ ಉದ್ಯೋಗ ಮೇಳ ನಡೆಸುವುದಾಗಿ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮಂಗಳೂರು ಬೃಹತ್ ಉದ್ಯೋಗ ಮೇಳ

ನಿರುದ್ಯೋಗ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಹಾಗೂ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ವ್ಯವಸ್ಥಿತವಾಗಿ ಉದ್ಯೋಗ ಮೇಳದಲ್ಲಿ ಆಯೋಜನೆಯನ್ನು ನಡೆಸಲು ಸೂಚಿಸಿದ್ದು, ಅದರ ಪ್ರಕಾರ ಉತ್ತಮವಾದ ರೀತಿಯಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಶಿಕ್ಷಣ ಪಡೆದ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸುವಂತೆ ಯೋಜಿಸಲಾಗಿದೆ.

ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಿಸುವ ನಿರೀಕ್ಷೆ ಇದ್ದು ಉದ್ಯೋಗದ ಅವಶ್ಯಕತೆ ಇರುವವರು ಈ ಮೇಳದಲ್ಲಿ ಪಾಲ್ಗೊಂಡು ಇದರ ಅನುಕೂಲ ಪಡೆಯುವಂತೆ ಅವರು ಹೇಳಿದ್ದಾರೆ.

ಉದ್ಯೋಗ ಮೇಳಕ್ಕಾಗಿ ವೆಬ್ಸೈಟ್

ಉದ್ಯೋಗ ಮೇಳಕ್ಕಾಗಿ ಪ್ರತ್ಯೇಕ ವೆಬ್ಸೈಟ್ ಸಿದ್ದಪಡಿಸುತ್ತಿದ್ದು, ವೆಬ್ಸೈಟ್ ಮೂಲಕ ಉದ್ಯೋಗ ಮೇಳದ ಮಾಹಿತಿ ಹಾಗು ನೋಂದಣಿ ಪ್ರಕ್ರಿಯೆ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಮಾಹಿತಿಯನ್ನು ಕೂಡ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ, ಅದಕ್ಕಾಗಿ ಮಲ್ಲಿಕಟ್ಟೆಯಲ್ಲಿರುವ ಇನ್‌ಕ್ಯುಬೇಶನ್ ಸೆಂಟರ್ ನಲ್ಲಿ ಕಂಟ್ರೋಲ್ ರೂಂ ರಚಿಸಿ ಅದರ ಮೂಲಕ ಮಾಹಿತಿಯನ್ನು ಪಡೆಯಲು ಅವಕಾಶ ಕಲ್ಪಿಸಲಾಗುವುದು, ಅಲ್ಲದೆ ಇಲ್ಲಿ ಭಾಗವಹಿಸುವ ಕಂಪನಿಗಳ ಜೊತೆ ಮಾತನಾಡಿ ಸೂಕ್ತವಾದ ಕಂಪನಿಗಳನ್ನು ಮಾತ್ರ ಆರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಯಾವುದೇ ರೀತಿಯ ಗೊಂದಲಗಳು ಸಂಭವಿಸದಂತೆ ಉದ್ಯೋಗಮೇಳವನ್ನು ಯಶಸ್ವಿಯಾಗಿ ನೆರವೇರಿಸಲು ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೇಳದ ಅಚ್ಚುಕಟ್ಟಾದ ಆಯೋಜನೆಗಾಗಿ ವಿವಿಧ ಸಮಿತಿಗಳನ್ನು ರಚಿಸಿ ಸ್ಥಳ ವೀಕ್ಷಣೆ, ಊಟೋಪಚಾರದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ನಿರ್ವಹಣೆಗಾಗಿ ವಿಶೇಷವಾದ ತಂಡವನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Mangalore DC informed about conducting Mangalore mega job fair on Feb 16 at Mangalore University campus.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+