ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯಲ್ಲಿರುವ ಸ್ನಾತಕೋತ್ತರ ಪದವಿ/ಕೋರ್ಸ್ ಗಳಿಗೆ 2020-21ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಯು.ಜಿ.ಸಿ. ಎನ್.ಇ.ಟಿ/ಎಸ್.ಎಲ್.ಇ.ಟಿ, ಉತ್ತೀರ್ಣತೆ/ಎಂ.ಫಿ.್/ಪಿ.ಹೆಚ್.ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 30,2021ರಂದು ಸಂಜೆ 5:30ರೊಳಗೆ ಕಚೇರಿಗೆ ಸಲ್ಲಿಸಬಹುದು. ಅರ್ಜಿಗಳನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿಯನ್ನು ಹಾಕಬಹುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಮತ್ತು ಅಪೂರ್ಣವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











